ವರದಿ: ಗಣೇಶ್ ಹೆಗಡೆ
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವರ್ತನೆ ಖಂಡಿಸಿ ವಿದ್ಯಾರ್ಥಿಗಳು ಹೋರಾಟ ಆರಂಭಿಸಿದ್ದಾರೆ. ವಿವಿಯ ವೈಸ್ ಚಾನ್ಸ್ ಲರ್ ಈಶ್ವರ ಭಟ್ ಹಾಗೂ ಸಚಿವ ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿ ನಗರದ ಮೌರ್ಯ ಸರ್ಕಲ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.
ಯುಜಿಸಿ ಮಾರ್ಗಸೂಚಿ ಅನ್ವಯ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಬಡ್ತಿ, ಇಂಟರ್ ಮೀಡಿಯೆಟ್ ಸೆಮಿಸ್ಟರ್ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಪ್ರಾರಂಭ ಹಾಗೂ ಹಿಂದಿನ ಸೆಮಿಸ್ಟರ್ ಫಲಿತಾಂಶ ಗೊಂದಲ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದ್ದು, ವಿಶ್ವವಿದ್ಯಾಲಯದ ವಿರುದ್ಧ ಅಕ್ರೋಶವನ್ನು ವಿದ್ಯಾರ್ಥಿಗಳ ಹೊರ ಹಾಕಿದರು.
Kshetra Samachara
09/12/2021 01:34 pm