ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 4 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಅಸ್ತು

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳ ಬದಲಿಗೆ 4 ಸಾವಿರ ಅತಿಥಿ ಶಿಕ್ಷಕರ ಎರಡನೇ ಹಂತದ ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

2021ರ ಸೆಪ್ಟೆಂಬರ್ ನಿಂದ 2022 ರ‌ ಮಾರ್ಚ್ ವರೆಗೆ ಒಟ್ಟು 18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಅನುಮತಿ ನೀಡಿತ್ತು.

ಇದೀಗ ಎರಡನೇ ಹಂತದಲ್ಲಿ ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಷರತ್ತಿಗೆ ಒಳಪಟ್ಟು ನೇಮಕ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. 2021ರ ನವೆಂಬರ್ ಅಂತ್ಯಕ್ಕೆ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 30606 ಶಿಕ್ಷಕರ ಹುದ್ದೆ ಖಾಲಿ ಇವೆ.

Edited By : Nirmala Aralikatti
PublicNext

PublicNext

01/01/2022 10:15 am

Cinque Terre

16.35 K

Cinque Terre

1

ಸಂಬಂಧಿತ ಸುದ್ದಿ