ಬೆಂಗಳೂರು: ನಗರದ ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲವೆಂದು ಆಡಳಿತ ಮಂಡಳಿ ಆದೇಶವನ್ನು ಹೊರಡಿಸಿದೆ.
ಇತ್ತೀಚೆಗಷ್ಟೇ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟೀಸ್ ನೀಡಲಾಗಿತ್ತು. ಇದೀಗ ಬೈಬಲ್ ವಾರ್ ಮುಂದುವರಿದಿದ್ದು, ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.
ಈ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿ, ಬೈಬಲ್ ಬಗ್ಗೆ ಕ್ರಿಶ್ಚಿಯನ್ ಮಕ್ಕಳಿಗಷ್ಟೆ ನೈತಿಕ ಬೋಧನೆ ಮಾಡಲಾಗ್ತಿತ್ತು. ನಮ್ಮ ಶಾಲೆಯಲ್ಲಿ ಬೈಬಲ್ ನೈತಿಕ ಬೋಧನೆ ಮಾಡುತ್ತಿದ್ದೆವು. ಧರ್ಮ ಬೋಧನೆ ಮಾಡುತ್ತಿರಲಿಲ್ಲ ಎಂದು ತಿಳಿಸಿದೆ.
ಸರ್ಕಾರ ಭಗವದ್ಗೀತೆ ಕಡ್ಡಾಯಗೊಳಿಸಿದರೆ ಸ್ವಾಗತಿಸುತ್ತೇವೆ. ಬೈಬಲ್‌ನಲ್ಲಿ ಪಾಸಿಂಗ್ ಮಾರ್ಕ್ಸ್ ತಗೆದುಕೊಳ್ಳಬೇಕು ಎಂದು ಕಡ್ಡಾಯವಿರಲಿಲ್ಲ, ಮಕ್ಕಳು ಪ್ರಶಸ್ತಿ ಪಡೆಯಲಷ್ಟೇ ಮಾಡಿದ್ದಾಗಿತ್ತು. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗಷ್ಟೆ ಶಾಲಾ ಅಡ್ಮಿಷನ್‍ಗೆ ಅನುಮತಿ ನೀಡಲಾಗಿದೆ ಎಂದು ಕ್ಲಾರೆನ್ಸ್ ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
PublicNext
30/04/2022 11:23 am