ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವವೂ ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಘಟಿಕೋತ್ಸವದಲ್ಲಿ ಸಾಮಾಜಿಕ ಅಸಮಾನತೆ ತೊಡೆದು ಹಾಕಲು ವಿಶಿಷ್ಟ ವಿಧಾನಗಳನ್ನು ಬಳಸಿ ಯಶಸ್ವಿಯಾದ ಸಮಾಜ ಸೇವಕ ಎಂ.ಎಸ್ ಮುತ್ತುರಾಜ್, ದೃಶ್ಯಕಲೆ ಕ್ಷೇತ್ರಕ್ಕೆ ಪ್ರಮುಖ ಕೊಡುಗೆ ನೀಡಿದ ಕಲಾವಿದ ಎಸ್.ಜಿ. ವಾಸುದೇವ್ ಮತ್ತು ಅಧ್ಯಾತ್ಮ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಅಕ್ಷಯ ಪಾತ್ರ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಮಧು ಪಂಡಿತ್ ದಾಸರಿಗೆ ಈ ಸಂದಭ೯ದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಈ ಸಲದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಒಟ್ಟು 321ಚಿನ್ನದ ಪದಕಗಳು ಹಾಗೂ 132 ನಗದು ಬಹುಮಾನಗಳನ್ನು ವಿತರಿಸಲಾಗಿದೆ. ಒಟ್ಟು 127 ಅಭ್ಯಥಿ೯ಗಳಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ವಿವಿಧ ವಿದ್ಯಾರ್ಥಿಗಳಿಗೆ ಪದಕ ಪ್ರದಾನ: ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸುಷ್ಮಾ ಎಚ್. ಅತಿ ಹೆಚ್ಚು ಅಂದರೆ ಏಳು ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ನಂತರ ಸಂಸ್ಕೃತ ವಿಭಾಗದ ಐಶ್ವಯ೯ ಪಿ.ಸಿ. ಮತ್ತು ಕನ್ನಡ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಶ್ರೀನಿವಾಸ ಎಸ್ ತಲಾ ಆರು ಚಿನ್ನದ ಪದಕವನ್ನು ಪಡೆದಿದ್ದಾರೆ. ಗಣಿತಶಾಸ್ತ್ರ ವಿಭಾಗದ ಸುರಭಿ ಎನ್, ಸಸ್ಯಶಾಸ್ತ್ರ ವಿಭಾಗದ ಸುರೇಶ್ ಬಾಬು ಎನ್, ಪ್ರಾಣಿಶಾಸ್ತ್ರ ವಿಭಾಗದ ಚಂದನ ಆರ್. ತಲಾ ಐದು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
PublicNext
30/04/2022 10:40 pm