ಬೆಂಗಳೂರು: ಕಳೆದೆರಡು ವರ್ಷಗಳಿಂದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ ಮಾಡಿಲ್ಲ. ಹೀಗಾಗಿ ಆ ಹಣವನ್ನು ಅರ್ಹ ಮಕ್ಕಳ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನೆರವಾಗಬೇಕು. ಸಾವಿರಾರು ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸೈಕಲ್ ವಿತರಿಸಲು ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ.
ಬಿಪಿಎಲ್ ಕುಟುಂಬದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಎಂಟನೇ ತರಗತಿಗೆ ದಾಖಲಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದ ವಿದ್ಯಾರ್ಥಿಗಳು ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ದೂರದ ಶಾಲೆಗೆ ಹೋಗಲು ಅನುಕೂಲ ಮಾಡಿಕೊಡಬೇಕು ಎಂದು ವೇದಿಕೆಯ ವಿ.ಪಿ. ನಿರಂಜನಾರಾಧ್ಯ ಕೇಳಿಕೊಂಡಿದ್ದಾರೆ.
Kshetra Samachara
05/05/2022 12:18 pm