ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೇ 3 ನೇ ವಾರದಲ್ಲಿ SSLC ರಿಸಲ್ಟ್ - ಸಚಿವ ನಾಗೇಶ್ ಹೇಳಿಕೆ

ವರದಿ - ಗಣೇಶ್ ಹೆಗಡೆ

ಬೆಂಗಳೂರು: ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟ ವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ. ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಪಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.

ಮಾರ್ಚ್​​ ಕೊನೆಯಲ್ಲಿ ಪರೀಕ್ಷೆ ಜರುಗಿತ್ತು. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್​ಎಸ್​​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ರಾಜ್ಯದ 15,387 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿತ್ತು. ಅತ್ಯಂತ ಸುಗಮವಾಗಿ ಈ ಬಾರಿ ಪರೀಕ್ಷೆಯನ್ನು ನಡೆಸಲಾಗಿದೆ. ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಎದುರಾಗಿಲ್ಲ.

ಪರೀಕ್ಷಾ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದು, ಮೂರನೇ ವಾರದಲ್ಲಿ ಪ್ರಕಟಿಸಲು ಎಸ್ಎಸ್ಎಲ್ ಸಿ ಬೋರ್ಡ್ ತಯಾರಿ ಮಾಡಿಕೊಂಡಿದೆ.

Edited By : Manjunath H D
PublicNext

PublicNext

10/05/2022 05:25 pm

Cinque Terre

42.1 K

Cinque Terre

0

ಸಂಬಂಧಿತ ಸುದ್ದಿ