ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜೂನ್ ಮೂರನೇ ವಾರ ಪ್ರಕಟ ಮಾಡುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಇರುವ ಎಸ್ ಎಸ್ ಎಲ್ ಸಿ ಬೋರ್ಡ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.
ಹೊಸಬರು, ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಎಲ್ಲ ಸೇರಿ ಹಿಂದಿ ಪರೀಕ್ಷೆಗೆ 1,33,119 ವಿದ್ಯಾರ್ಥಿಗಳು ನೊಂದಾಯಿಸಿದ್ದು, 1,05,679 ವಿದ್ಯಾರ್ಥಿಗಳು ಹಾಜರಾಗಿದ್ದರೆ 4,503 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಕಳೆದ ಏಪ್ರಿಲ್ 22ರಿಂದ ಪಿಯು ಪರೀಕ್ಷೆಯು ಶುರುವಾಗಿ ನಿನ್ನೆ ಮೇ 18 ರಂದು ಮುಕ್ತಾಯಗೊಂಡಿದೆ.
ಪರೀಕ್ಷಾ ಅಕ್ರಮ, ಅವ್ಯ ವಹಾರದಲ್ಲಿ ಯಾರು ಭಾಗಿ ಯಾಗಿಲ್ಲ. ಯಾವುದೇ ವಿದ್ಯಾರ್ಥಿ ಯು ಡಿಬಾರ್ ಆಗಿಲ್ಲ. ಹಾಗೆ ಯಾವುದೇ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿಲ್ಲ ಅಂತ ಸಚಿವರು ತಿಳಿಸಿದರು. ಈ ಬಾರಿ ಪರೀಕ್ಷೆಗೆ ಒಟ್ಟು 6,84,255 ವಿದ್ಯಾರ್ಥಿಗಳು ಎದುರಿಸಿದ್ದಾರೆ. ಇದರಲ್ಲಿ ಬಾಲಕರು-3,46,936, ಬಾಲಕಿಯರು-3,37,319 ಇದ್ದರೆ, ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು- 61,808, ಖಾಸಗಿ ವಿದ್ಯಾರ್ಥಿಗಳು 21,928 ಜನ ಪರೀಕ್ಷೆ ಬರೆದಿದ್ದಾರೆ.
PublicNext
19/05/2022 04:59 pm