ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂ ವಿ ವಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ನಡುವಿನ ಜಗಳ ತಾರಕಕ್ಕೆ

ಬೆಂಗಳೂರು : ವಿಶ್ವವಿದ್ಯಾಲಯದ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು (ಯುವಿಸಿಇ)ಕಟ್ಟಡ ನಿರ್ಮಾಣಕ್ಕೆ ವರ್ಗಾಯಿಸಲು ಕೈಗೊಂಡಿರುವ ಕ್ರಮ ಖಂಡಿಸಿ ಬೆಂಗಳೂರು ವಿವಿಯ ಸಂಶೋಧನೆ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟ ಇಂದು ಜ್ಞಾನಭಾರತಿ ಆವರಣದ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಈ ಸಂದರ್ಭದಲ್ಲಿ ಹಣಕಾಸು ಅಧಿಕಾರಿ ಕೊಠಡಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ನೀಡಲಾಗಿತ್ತು. ಇದನ್ನು ಖಂಡಿಸಿ ಇಂದು ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೂಡಲೇ ಹಣ ವರ್ಗಾವಣೆ ನಿರ್ಣಯವನ್ನು ಕೈ ಬಿಟ್ಟು ವಿದ್ಯಾರ್ಥಿಗಳ ವಿರುದ್ಧ ನೀಡಿರುವ ದೂರನ್ನು ಹಿಂಪಡೆಯುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಇಂದು ತರಗತಿಗಳನ್ನು ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ವಿವಿಯ 52 ವಿಭಾಗಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ವಿವಿಯ ಜ್ಞಾನಭಾರತಿ ಆವರಣ ಸಂಪೂರ್ಣ ಸ್ತಬ್ಧವಾಗಿದ್ದು, ಪೊಲೀಸರ ಸರ್ಪಗಾವಲು ಹಾಕಲಾಗಿತ್ತು. ದೂರು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

Edited By : Nirmala Aralikatti
Kshetra Samachara

Kshetra Samachara

30/05/2022 10:30 pm

Cinque Terre

1.35 K

Cinque Terre

0

ಸಂಬಂಧಿತ ಸುದ್ದಿ