ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಕ್ರ ತೀರ್ಥ ಸಮಿತಿ ಬರ್ಖಾಸ್ತು...!

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿನ ಕೆಲವು ಲೋಪದೋಷಗಳನ್ನು ಪರೋಕ್ಷವಾಗಿ ಒಪ್ಪಿಕೊಂಡ ಸರ್ಕಾರ ಪರಿಷ್ಕೃತ ಪಠ್ಯದಲ್ಲೂ ಪರಿಷ್ಕರಣೆಗೆ ಸಹಮತ ವ್ಯಕ್ತಪಡಿಸಿದೆ. ಜತೆಗೆ ರೋಹಿತ್ ಚಕ್ರತೀರ್ಥ ನೇತೃತ್ವದ ಪರಿಷ್ಕರಣಾ ಸಮಿತಿಯನ್ನು ರಾಜ್ಯ ಸರ್ಕಾರ ವಿಸರ್ಜನೆ ಮಾಡಿದೆ.

ಸದ್ಯ ಪಠ್ಯ ಪುಸ್ತಕ ಪರಿಕ್ಷರಣಾ ಕಾರ್ಯ ಮುಗಿದಿರುವ ಹಿನ್ನೆಲೆ ಯಲ್ಲಿ ಸಮಿತಿಯನ್ನು ವಿಸರ್ಜಿ ಸಲಾಗಿದೆ.ಇದೇ ವೇಳೆ ಹಳೆ ಪಠ್ಯ ಪುಸ್ತಕಗಳನ್ನು ಮುದ್ರಣ ಮಾಡಿ ನೀಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ರವಾನಿಸಿದ್ದಾರೆ.

ಪಂಡಿತ್ ಆರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿ ಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆ ಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಬರಗೂರು ಸಮಿತಿಯಿಂದ ರಚಿತವಾದ ಪಠ್ಯ ಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯ ಪುಸ್ತಕದಲ್ಲಿ ಸಮಾನ್ಯವಾದ ಅಂಶಗಳಿವೆ.

ಪ್ರಸ್ತುತದ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಕ್ಕೆ ಸಂಬಂಧಿಸಿದಂತೆ ಯಾರ ಭಾವನೆಗೂ ಧಕ್ಕೆ ಆಗದ ರೀತಿಯಲ್ಲಿ ಪರಿಷ್ಕರಣೆ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

04/06/2022 07:36 am

Cinque Terre

2 K

Cinque Terre

0

ಸಂಬಂಧಿತ ಸುದ್ದಿ