ವರದಿ- ಗಣೇಶ್ ಹೆಗಡೆ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಮಲ್ಲೇಶ್ವರಂನ ಪಿಯುಸಿ ಬೋರ್ಡ್ನಲ್ಲಿ ನಾಳೆ 11.30 ಕ್ಕೆ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸುವರು. ಎಸ್ಎಸ್ಎಲ್ಸಿ ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್ಗೆ ಫಲಿತಾಂಶ ರವಾನೆಯಾಗಲಿದೆ.
ಏಪ್ರಿಲ್ 22ರಿಂದ ಮೇ 18 ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಈ ಪೈಕಿ ಬಾಲಕರು-3,46,936, ಬಾಲಕಿಯರು-3,37,319 ಇದ್ದರೆ, ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು-61,808 ಖಾಸಗಿ ವಿದ್ಯಾರ್ಥಿಗಳು 21,928 ಇದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗದಲ್ಲಿ 2,28,167, ವಾಣಿಜ್ಯ ವಿಭಾಗದಲ್ಲಿ 2,45,519, ವಿಜ್ಞಾನ ವಿಭಾಗದಲ್ಲಿ 2,10,569 ಜನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆದಿದ್ದಾರೆ.
http://www.karresults.nic.in ಈ ವೆಬ್ ಸೈಟ್ ನಲ್ಲಿ ರಿಸಲ್ಟ್ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ನೋಡಬಹುದು.
PublicNext
17/06/2022 07:59 pm