ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ-ವೆಬ್‌ಸೈಟ್‌ನಲ್ಲಿ ಲಭ್ಯ

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.

ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.

ನಾಳೆ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ (https://karresults.nic.in/) ಫಲಿತಾಂಶ ವೀಕ್ಷಿಸಬಹುದು.

ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.

Edited By :
PublicNext

PublicNext

20/07/2022 07:39 pm

Cinque Terre

15.69 K

Cinque Terre

0

ಸಂಬಂಧಿತ ಸುದ್ದಿ