ವರದಿ - ಗೀತಾಂಜಲಿ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11ರಿಂದ 17ರವರೆಗೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಮದರಸಾಗಳಲ್ಲಿ ಧ್ವಜಾರೋಹಣದ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ, ಸ್ಮರಣೆಯ ಗೀತೆ, ಗಾಯನ, ಕ್ವಿಜ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಬೇಕೆಂದು ತಿಳಿಸಲಾಗಿದೆ.
ಸರ್ಕಾರದ ಸೌಲಭ್ಯ ಪಡೆಯುವವರು ಸರ್ಕಾರದ ನಿಯಮ ಪಾಲಿಸೋದು ಕಡ್ಡಾಯವಾಗಿದೆ. ಎಲ್ಲಾ ಮದರಾಸಗಳಲ್ಲಿ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜು, ಮದರಸಾಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಎಲ್ಲಾ ಶಿಕ್ಷಣ ಸಿಬ್ಬಂದಿಗಳು ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವಂತೆ ಸೂಚಿಸಲಾಗಿದೆ.
Kshetra Samachara
21/07/2022 04:55 pm