ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಆಗಸ್ಟ್ 12 ರಿಂದ ಆಗಸ್ಟ್ 25 ರವರೆಗೆ ನಡೆಯಲಿದ್ದು, ಈ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. ಆಗಸ್ಟ್ 12 ರಿಂದ ಆಗಸ್ಟ್ 25 ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ ಪರೀಕ್ಷೆಗೆ ತೆರಳಲು ಮಾತ್ರ ಈ ಉಚಿತ ಬಸ್ ಪ್ರಯಾಣದ ಅವಕಾಶವಿದೆ. ಅಂದರೆ ಪರೀಕ್ಷಾ ಅವಧಿಯಲ್ಲಿ ಮಾತ್ರ ವಿದ್ಯಾರ್ಥಿಗಳು ಈ ಉಚಿತ ಬಸ್ ಪ್ರಯಾಣದ ಸೇವೆ ಪಡೆಯಬಹುದು.

ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆ ಎಸ್ ಆರ್ ಟಿ ಸಿ ನಿಗಮವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ಈ ಸೌಲಭ್ಯವನ್ನು ಸದುಪಯೋಗಪಡಸಿಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.

Edited By : Nirmala Aralikatti
Kshetra Samachara

Kshetra Samachara

10/08/2022 09:59 pm

Cinque Terre

10.69 K

Cinque Terre

0

ಸಂಬಂಧಿತ ಸುದ್ದಿ