ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆಯಿಂದ (ಆ.12) ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಾಳೆಯಿಂದ ಆ.25ರವರೆಗೆ ಪೂರಕ ಪರೀಕ್ಷೆಯನ್ನು ನಡೆಸಲಿದೆ.

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಬಸ್ ಸೌಲಭ್ಯವನ್ನು ಕೆಎಸ್ಆರ್‌ಟಿಸಿ ಕಲ್ಪಿಸಲಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಹಿಂದಿರುವಾಗ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಸಹ ಮಾಡಿಕೊಳ್ಳುತ್ತಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು, ತಾವು ಅಧ್ಯಯನ ಮಾಡಿದ ಶಾಲೆಗಳಿಗೆ ತೆರಳಿ ಪ್ರವೇಶ ಪತ್ರ ಪಡೆಯಬಹುದಾಗಿದೆ.

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ನಾಳೆಯಿಂದ 25-08-2022ರವರೆಗೆ ನಡೆಯಲಿರುವ ಪೂರಕ ಪರೀಕ್ಷೆ

ಪರೀಕ್ಷೆ ವೇಳಾಪಟ್ಟಿ ಇಂತಿದೆ.

ದಿನಾಂಕ 12-08-2022 - ಕನ್ನಡ, ಅರೇಬಿಕ್

ದಿನಾಂಕ 13-08-2022 - ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ದಿನಾಂಕ 16-08-2022 - ಹಿಂದಿ

ದಿನಾಂಕ 17-08-2022 - ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ

ದಿನಾಂಕ 18-08-2022 - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ದಿನಾಂಕ 19-08-2022 - ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ

ದಿನಾಂಕ 20-08-2022 - ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ

ದಿನಾಂಕ 22-08-2022 - ಇಂಗ್ಲೀಷ್

ದಿನಾಂಕ 23-08-2022 - ಅರ್ಥಶಾಸ್ತ್ರ, ಜೀವಶಾಸ್ತ್ರ

ದಿನಾಂಕ 24-08-2022- ಇತಿಹಾಸ, ಸಂಖ್ಯಾಶಾಸ್ತ್ರ

ದಿನಾಂಕ 25-08-2022 - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Edited By : Nagaraj Tulugeri
PublicNext

PublicNext

11/08/2022 04:23 pm

Cinque Terre

9.86 K

Cinque Terre

0

ಸಂಬಂಧಿತ ಸುದ್ದಿ