ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 15,000 ಶಾಲಾ ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಹಾಗೂ ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಇದೀಗ ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.

ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಪ್ರಕಟಿಸಲಾಗುತ್ತದೆ. 1:1 ಮುಖ್ಯ / ಅಂತಿಮ ಆಯ್ಕೆಪಟ್ಟಿಯನ್ನು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮೇ 21, 22, ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಸಹ ಇಂದು ಬಿಡುಗಡೆ ಮಾಡಲಾಗಿದೆ. ಈ ಕೆಳಗಿನ ಲಿಂಕ್ ಅನ್ನು ರಿಸಲ್ಟ್ ಗಾಗಿ ಕ್ಲಿಕ್ ಮಾಡಿ

https://www.schooleducation.kar.nic.in/index.html

Edited By : Nagaraj Tulugeri
Kshetra Samachara

Kshetra Samachara

17/08/2022 09:15 pm

Cinque Terre

2.25 K

Cinque Terre

0

ಸಂಬಂಧಿತ ಸುದ್ದಿ