ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ದೇವಾಲಯ ವಿಚಾರವಾಗಿ ದೊಡ್ಡ ಗಲಾಟೆಯೇ ನಡೆದಿದೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಸಹ ರಾಜ್ಯಪಾಲರಿಗೆ ಪತ್ರ ಬರೆದು ಪೋಸ್ಟ್ ಮಾಡಿದ್ದಾರೆ. ಪತ್ರದಲ್ಲಿ ಬೆಂಗಳೂರು ವಿದ್ಯಾನಿಲಯದ ಆವರಣದಲ್ಲಿ ಗಣಪತಿ ದೇವಸ್ಥಾನ ನಿರ್ಮಿಸಲು ಸಾಧ್ಯವಿಲ್ಲ. ಮಾಲಭೂತ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುವ ಸಂದರ್ಭದಲ್ಲಿ ದೇವಾಲಯದ ಅವಶ್ಯಕತೆ ಇಲ್ಲ. ಮೊದಲು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ. ಶೈಕ್ಷಣಿಕ ವಾತಾವರಣವನ್ನು ನಿರ್ಮಿಸಲು ಸಹಾಯ ಮಾಡಿ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
Kshetra Samachara
10/09/2022 10:09 pm