ಈ ಸಲದ ಸಿಇಟಿ ಕೌನ್ಸಲಿಂಗ್ ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಯಲಿದೆ.ಈ ಸಂಬಂಧ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ನೀಟ್ ಪರೀಕ್ಷೆಯ ಫಲಿತಾಂಶ ಪ್ರಟಕವಾದ ಬಳಿಕ, ಅಲ್ಲಿಯ ಅಂಕಗಳನ್ನು ಪರಿಗಣಿಸಿ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಬಾರಿ ಸಿಇಟಿ ಕೌನ್ಸಲಿಂಗ್ ಅತ್ಯಂತ ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಬಹುತೇಕ ಆನ್ ಲೈನ್ ನಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೈಗೊಂಡಿದೆ.
ಅಭ್ಯರ್ಥಿಗಳ ಆದಾಯ, ಜಾತಿ, ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರ, ಭಾಷಾ ಅಲ್ಪಸಂಖ್ಯಾತರ ಪ್ರಮಾಣ ಪತ್ರ, ಇತ್ಯಾದಿ ಪ್ರಮಾಣ ಪತ್ರಗಳನ್ನು ಆನ್ಲೈನ್ ನಲ್ಲೇ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಿಂದ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಸಿಬಿಎಸ್ ಸಿ, ಐಸಿಎಸ್ಇ ಹೊರತುಪಡಿಸಿ ರಾಜ್ಯ ಪಠ್ಯಕ್ರಮದಲ್ಲಿ ಪಿಯುಸಿ ಮಾಡಿದವರ ಅಂಕ ಪಟ್ಟಿಗಳನ್ನು ಕೂಡ ಕೆಇಎ ಆನ್ ಲೈನ್ ನಲ್ಲಿ ಪಡೆದ ಸೀಟು ಹಂಚಿಕೆ ಮಾಡಲಿದೆ.
Kshetra Samachara
17/08/2022 08:42 pm