ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸದಸ್ಯರ ಅನುದಾನದಲ್ಲಿ ಲ್ಯಾಪ್ಟಾಪ್ ವಿತರಣೆ : ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ

ಆನೇಕಲ್ ವಿಧಾನಸಭಾ ಕ್ಷೇತ್ರದ ಬಳ್ಳೂರು ಗ್ರಾಮದಲ್ಲಿ ಇಂದು ಸದಸ್ಯರ ಅನುದಾನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜತಗೆ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನ ಮೇಲೆತ್ತುವ ಸಲುವಾಗಿ ಗ್ರಾಮ ಪಂಚಾಯಿತಿ ವತಿಯಿಂದ ಕೌಶಲ್ಯ ತರಬೇತಿ ನೀಡಲಾಯಿತು.

ಬಳ್ಳೂರು ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣ ರೆಡ್ಡಿ, ಸದಸ್ಯರಾದ ಮಧುಕುಮಾರ್, ವಸಂತ ರೆಡ್ಡಿ, ಪೂರ್ಣಿಮಾ ಮಧು ಕುಮಾರ್, ಅಶೋಕ್ ರೆಡ್ಡಿ ಸೇರಿದಂತೆ ಹಲವು ಸದಸ್ಯರು ಭಾಗವಹಿಸಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅನುದಾನವನ್ನ ಈ ರೀತಿ ಸದ್ಬಳಕೆ ಮಾಡಿಕೊಂಡಿರುವುದಾಗಿ ಪಂಚಾಯತಿ ಅಧ್ಯಕ್ಷ ನಾರಾಯಣ ರೆಡ್ಡಿ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

02/09/2022 09:06 pm

Cinque Terre

3.52 K

Cinque Terre

0

ಸಂಬಂಧಿತ ಸುದ್ದಿ