ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆ.ಆರ್‌.ಪುರ: ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ಕೆ.ಆರ್.ಪುರ: ಇಲ್ಲಿನ ಬಸವನಪುರ ವಾರ್ಡ್ ವ್ಯಾಪ್ತಿಯ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಅವರ ʼಆದ್ವಿತ ಜಯಪ್ರಕಾಶ್ʼ ಫೌಂಡೇಷನ್ ವತಿಯಿಂದ ಹೊಸ ವರ್ಷದ ಅಂಗವಾಗಿ ಕಲಿಕಾ ಸಾಮಗ್ರಿ ವಿತರಿಸಲಾಯಿತು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಯಪ್ರಕಾಶ್‌, ಬಸವನಪುರ ವಾರ್ಡ್ ನ 5 ಸರ್ಕಾರಿ ಶಾಲೆಗಳಿಗೆ ಪುಸ್ತಕ, ಬ್ಯಾಗ್ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಸೇರಿದಂತೆ ಆಹಾರ ಪದಾರ್ಥ ವಿತರಿಸಲಾಯಿತು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಕುಂದುಕೊರತೆ ಆಗದಂತೆ ನೋಡಿಕೊಳ್ಳಲು ನಾವು ಸಿದ್ಧವಿದ್ದೇವೆ. ಮುಂದಿನ ದಿನಗಳಲ್ಲಿ ಈ ಶಾಲಾ ಮಕ್ಕಳಿಗೆ ಶೂಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

30/12/2021 03:59 pm

Cinque Terre

724

Cinque Terre

0

ಸಂಬಂಧಿತ ಸುದ್ದಿ