ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಮತ್ತೆ ಶಾಲೆ ಶುರು

ವರದಿ: ಗಣೇಶ್ ಹೆಗಡೆ

ಬೆಂಗಳೂರು : ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿವೆ. 24 ದಿನಗಳ ಬಳಿಕ ಕೋವಿಡ್ ನಿಯಮದಂತೆ ಶಾಲೆ ಮರಳಿ ಆರಂಭವಾಗಿದ್ದು, ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.

ಜನವರಿ 6 ರಿಂದ ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚಿದ ಕಾರಣಕ್ಕೆ ಬೆಂಗಳೂರು ನಗರ ಹಾಗೂ ಗ್ರಾಮೀಣ ಜಿಲ್ಲಾ ಪ್ರದೇಶದ ಶಾಲೆಗಳಿಗೆ ಭೌತಿಕ ತರಗತಿಗಳನ್ನು ನಿಲ್ಲಿಸಿ, ಆನ್ ಲೈನ್ ಶಿಕ್ಷಣ ನೀಡಬೇಕೆಂದು ಸರ್ಕಾರ ಆದೇಶಿಸಿತ್ತು.

ಇದೀಗ ಮೂರನೇ ಅಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆ ಇರುವುದರಿಂದ 1-9ನೇ ತರಗತಿಗಳು ಪುನಾರಂಭವಾಗಿವೆ. ಸದ್ಯ 10, 11 ಹಾಗೂ 12 ತರಗತಿಗಳು ಎಂದಿನಂತೆ ನಡೆಯುತ್ತಿದ್ದು, ಆಯಾ ಜಿಲ್ಲಾಡಳಿತ ಹಾಗೂ ಬಿಬಿಎಂಪಿಯ ಆದೇಶದ ಪ್ರಕಾರ ಕಾರ್ಯನಿರ್ವಹಿಸಬೇಕೆಂದು ತಿಳಿಸಲಾಗಿದೆ.

Edited By : Shivu K
PublicNext

PublicNext

31/01/2022 12:17 pm

Cinque Terre

35.82 K

Cinque Terre

0

ಸಂಬಂಧಿತ ಸುದ್ದಿ