ಬೆಂಗಳೂರು: ಎರಡನೇ ದಿನದ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ದ್ವಿತೀಯ ಭಾಷೆ ಪರೀಕ್ಷೆಗೆ 22,063 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮೊದಲ ದಿನಕ್ಕಿಂತ ಇಂದು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿದ್ದಾರೆ. ಅನಾರೋಗ್ಯ ಹಿನ್ನೆಲೆ 195 ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಬಾಕಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿರುವ ಮಾಹಿತಿ ಸಿಕ್ಕಿದೆ. ಮೊದಲ ದಿನದ ಪರೀಕ್ಷೆಯಲ್ಲಿ 20,994 ವಿದ್ಯಾರ್ಥಿಗಳು.
ಇಂದು ಬರೋಬ್ಬರಿ 22,063 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ನೀಡಿದೆ.
ಮಾರ್ಚ್ 28ರಿಂದ ಆರಂಭವಾಗಿರೋ ಎಸ್ಎಸ್ಎಲ್ಸಿ ಪರೀಕ್ಷೆ ಮೊದಲ ದಿನವೇ ಶಾಕ್ ಕಾದಿತ್ತು. ವಿದ್ಯಾರ್ಥಿಗಳ ಭವಿಷ್ಯವನ್ನೇ ನಿರ್ಧರಿಸೋ ಎಸ್ಎಸ್ಎಲ್ಸಿ ಎಕ್ಸಾಂಗೆ ಸಾವಿರಾರು ಸ್ಟೂಡೆಂಟ್ಸ್ ಚಕ್ಕರ್ ಹೊಡೆದಿದ್ರು. ಅದ್ರಲ್ಲೂ ರಾಜ್ಯದಲ್ಲಿ ಪರೀಕ್ಷೆಗೆ ಬರೋಬ್ಬರಿ 20 ಸಾವಿರಕ್ಕೂ ಹೆಚ್ಚು ಸ್ಟೂಡೆಂಟ್ಸ್ ಹಾಜರಾಗಿಲ್ಲವಂತೆ. ಇಷ್ಟೊಂದು ವಿದ್ಯಾರ್ಥಿಗಳು ವೈಯಕ್ತಿಕ ಕಾರಣದಿಂದ ಎಕ್ಸಾಂಗೆ ಗೈರಾದ್ರಾ? ಇಲ್ಲ ಹಿಜಾಬ್ ಕಾರಣದಿಂದ ಏನಾದ್ರೂ ಬಂದಿಲ್ವಾ ಅನ್ನೋ ಚರ್ಚೆ ಈಗ ಹೆಚ್ಚಾಗಿದೆ.
Kshetra Samachara
30/03/2022 06:40 pm