ಬೆಂಗಳೂರು: ದ್ವೀತಿಯ ಪಿಯು ವಿದ್ಯಾರ್ಥಿಗಳಿಗೆ ಇದು ಎರಡನೇ ಹಂತದ ಪರೀಕ್ಷೆ. ಮಕ್ಕಳಿಗೆ ಮುಂದಿನ ಭವಿಷ್ಯಕ್ಕೆ ಈ ಪರೀಕ್ಷೆ ತುಂಬಾ ಮುಖ್ಯ. ಹೀಗಾಗಿ ನಾಳೆಯಿಂದ ನಡೆಯುವ ದ್ವೀತಿಯ ಪಿಯುಸಿ ಪರೀಕ್ಷೆಗೆ ಮಕ್ಕಳು ರೆಡಿಯಾಗಿದ್ದಾರೆ. ಮತ್ತೊಂದು ಕಡೆ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ SOP ಪ್ರಕಾರ ಪರೀಕ್ಷೆ ಕೇಂದ್ರಗಳನ್ನ ರೆಡಿ ಮಾಡಿದ್ದಾರೆ.
ನಾಳೆಯಿಂದ ದ್ವೀತಿಯ ಪಿಯುಸಿ ಪರೀಕ್ಷೆ ಶುರುವಾಗಲಿದ್ದು, ಮೇ18ಕ್ಕೆ ಮುಗಿಯಲಿದೆ. ಹೀಗಾಗಿ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ನಾಳೆ ಮೊದಲ ಪೆಪರ್ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಇರಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆ ಮುಗಿಯಲಿದೆ. ಒಟ್ಟು 6 ಲಕ್ಷದ 84 ಸಾವಿರ 255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದು, 3 ಲಕ್ಷ 46 ಸಾವಿರ 936 ಬಾಲಕರು ಹಾಗೂ 3 ಲಕ್ಷ 37 ಸಾವಿರ 319 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.
ಒಟ್ಟು ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು, ರೆಗ್ಯುಲರ್ ವಿದ್ಯಾರ್ಥಿಗಳು- 6,00,519,, ಪುನರಾವರ್ತಿತ ಅಭ್ಯರ್ಥಿಗಳು- 61,808
ಖಾಸಗಿ ಅಭ್ಯರ್ಥಿಗಳು 21,928 ಪರೀಕ್ಷೆ ಬರೆಯಲಿದ್ದಾರೆ. ಎಕ್ಸಾಂ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಇರಲಿದ್ದು, 200 ಮೀಟರ್ ನಿಷೇದಾಜ್ಞೆ ಜಾರಿಯಾಗಿದೆ. ಪರೀಕ್ಷೆ ಪ್ರವೇಶ ಪತ್ರ ತೋರಿ KSRTC ಹಾಗೂ BMTC ಬಸ್ ನಲ್ಲಿ ಉಚಿತ ಸೇವೆ ಇರಲಿದೆ.
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ
ಏ. 22 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏ. 23 - ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏ. 25 - ಅರ್ಥಶಾಸ್ತ್ರ
ಏ. 26 - ಮನಶ್ಶಾಸ್ತ್ರ, ರಸಾಯನ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ
ಏ. 28 - ಕನ್ನಡ
ಮೇ 4 - ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 5 - ಮಾಹಿತಿ ತಂತ್ರಜ್ಞಾನ, ರಿಟೈಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ ನೆಸ್
ಮೇ 6 - ಇಂಗ್ಲಿಷ್
ಮೇ 10 - ಇತಿಹಾಸ, ಭೌತಶಾಸ್ತ್ರ
ಮೇ 12 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14 - ಸಮಾಜಶಾಸ್ತ್ರ, ಗಣಕ ವಿಜ್ಞಾನ, ವಿದ್ಯುನ್ಮಾನ ಶಾಸ್ತ್ರ
ಮೇ 17 - ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹವಿಜ್ಞಾನ
ಮೇ 18 - ಹಿಂದಿ
ನಾಳೆ ನಡೆಯುವ ಪರೀಕ್ಷೆಗೆ ವಿದ್ಯಾರ್ಥಿಗಳು ಸ್ವಲ್ಪ ಟೆನ್ಶನ್ ನಡುವೆ ತಯಾರಿ ನಡೆಸಿದ್ದಾರೆ.
ಇನ್ನೂ SSLC ರೀತಿಯಲ್ಲಿ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಜಾರಿಯಾಗಿದೆ. ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆ ಅವಕಾಶ ಇಲ್ಲ.
ಹೀಗಾಗಿ ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ಪಾಲನೆ ನಿಯಮ ಕಡ್ಡಾಯವಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಆರ್. ರಾಮಚಂದ್ರನ್ ಹೇಳಿದ್ರು.
ಒಟ್ಟಿನಲ್ಲಿ ಉಡುಪಿಯಿಂದ ಆರಂಭವಾದ ಹಿಜಾಬ್ ಗಲಾಟೆ ನಾಳೆ ನಡೆಯುವ ಪಿಯು ಪರೀಕ್ಷೆಗೆ ಸದ್ದು ಮಾಡಬಹುದು. ಹೀಗಾಗಿ ಶಿಕ್ಷಣ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆಯಾಗಿ ಪರೀಕ್ಷೆ ಕೇಂದ್ರಗಳ ಸುತ್ತಲೂ ಟೈಟ್ ಸೆಕ್ಯೂರಿಟಿ ನಿಯೋಜನೆ ಮಾಡಿದೆ.
PublicNext
21/04/2022 08:45 pm