ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೇ 15ರೊಳಗೆ SSLC ಪರೀಕ್ಷೆಯ ಫಲಿತಾಂಶ

ವರದಿ - ಗಣೇಶ್ ಹೆಗಡೆ

ಬೆಂಗಳೂರು: ಹಿಜಾಬ್ ಗಲಾಟೆ ನಡುವೆಯೇ ರಾಜ್ಯಾದ್ಯಂತ ಎಸ್ಎಸ್ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನೆರವೇರಿದೆ. ಸದ್ಯ 2021-22ನೇ ಸಾಲಿನ SSLC ಫಲಿತಾಂಶದ ದಿನಾಂಕ ಅಂತಿಮಗೊಂಡಿದೆ. ಮೇ 15ರೊಳಗೆ SSLC ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಫಲಿತಾಂಶ ಪ್ರಕಟಕ್ಕೆ SSLC ಬೋರ್ಡ್ ನಿಂದ ತಾತ್ಕಾಲಿಕ ಡೇಟ್ ನೀಡಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಮೇ 15 ರೊಳಗೆ ಫಲಿತಾಂಶ ಘೋಷಣೆ ಮಾಡಲಾಗುತ್ತೆ. ಕೀ ಉತ್ತರಗಳು ಏ.12ರಿಂದಲೇ ವೆಬ್ ಸೈಟ್ ನಲ್ಲಿ ಪ್ರಕಟಗೊಂಡಿವೆ. ಏ.21ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆದು ಇದೀಗ ಪೂರ್ಣಗೊಂಡಿದೆ.

ಪರೀಕ್ಷೆಯ ಉತ್ತರ ಪತ್ರಿಕೆಗಳು ಜಿಲ್ಲಾವಾರುಗಳಿಂದ ಕೇಂದ್ರಕ್ಕೆ ಇಂದು ಬಂದು ತಲುಪಿದೆ.ಅದರ ವರ್ಗೀಕರಣ ಕಾರ್ಯ ನಡೆಯುತ್ತಿ ದ್ದು, ವೆಬ್ ಸೈಟ್ ನಲ್ಲಿ ಅಂಕಗಳ ಅಪ್ಲೋಡ್ ಕಾರ್ಯ ನಡೆಯುತ್ತಿದೆ. ಕಂಪ್ಯೂಟರ್‌ನಲ್ಲಿ ಅಂಕಗಳ ಫೈನಲೈಸ್ ಮಾಡಲಾಗುತ್ತದೆ. ಈ ಕಾರ್ಯ ಮುಗಿದ ಒಂದು ವಾರದಲ್ಲೇ ಫಲಿತಾಂಶ ಪ್ರಕಟವಾಗುತ್ತೆ. ರಾಜ್ಯದ ಒಟ್ಟು 238 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಪ್ರತೀ ಜಿಲ್ಲೆಯಲ್ಲೂ ವಿಷಯವಾರು ಮೌಲ್ಯಮಾಪನ ಕೇಂದ್ರಗಳಿವೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶದ ಸಂದೇಶ ರವಾನಿಸಲಾಗುತ್ತದೆ ಎಂದು ಎಸ್‌ಎಸ್‌ಎಲ್‌ಸಿ ಬೋರ್ಡ್ ನಿರ್ದೇಶಕ ಹೆಚ್.ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.

Edited By : Nagesh Gaonkar
PublicNext

PublicNext

04/05/2022 08:21 pm

Cinque Terre

41.05 K

Cinque Terre

1

ಸಂಬಂಧಿತ ಸುದ್ದಿ