ಬೆಂಗಳೂರು: ರಾಜ್ಯದಲ್ಲಿಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯಲ್ಲಿ ಸುಮಾರು 33,782 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಹೊಸಬರು, ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಸೇರಿ ಇಂಗ್ಲಿಷ್ ಪರೀಕ್ಷೆಗೆ 6,32,202 ನೋಂದಾಯಿಸಿದ್ದು, 5,98,420 ವಿದ್ಯಾರ್ಥಿಗಳು ಹಾಜರಾಗಿದ್ರೆ, 33,782 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಗೈರು ಹಾಜರಿ ಸಂಖ್ಯೆ ಹೆಚ್ಚಿದೆ. ಹೊಸಬರು 24,774, ಪುನರಾವರ್ತಿತ ವಿದ್ಯಾರ್ಥಿಗಳು 6,646 ಹಾಗೂ ಖಾಸಗಿಯ 2,362 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇನ್ನು ಪರೀಕ್ಷೆಯ ಸಮಯದಲ್ಲಿ ಅಕ್ರಮ ಅಥವಾ ಅವ್ಯವಹಾರದಲ್ಲಿ ಯಾರು ಭಾಗಿಯಾಗಿಲ್ಲ. ಯಾವುದೇ ವಿದ್ಯಾರ್ಥಿಯು ಡಿಬಾರ್ ಆಗಿಲ್ಲ. ಹಾಗೇ ಯಾವುದೇ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿಲ್ಲ ಅಂತ ಪಿಯು ಬೋರ್ಡ್ ತಿಳಿಸಿದೆ.
Kshetra Samachara
06/05/2022 04:47 pm