ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯಾದ್ಯಂತ ಶಾಲೆಗಳು ಪುನರಾರಂಭ; ಮಕ್ಕಳಿಗೆ ಅದ್ಧೂರಿ ಸ್ವಾಗತ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭವಾಗಿವೆ. ಸರ್ಕಾರಿ, ಅನುದಾನಿತ ಮತ್ತು ಅನುದಾನಿತರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕರು ಆದರದಿಂದ ಬರಮಾಡಿಕೊಳ್ಳುತ್ತಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲೆಗೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳಲು ಶಾಲಾ ಆಡಳಿತಾಧಿಕಾರಿಗಳು, ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದಾರೆ. ತಳಿರು ತೋರಣ ಕಟ್ಟಿ ಶಾಲೆಗಳನ್ನು ಶೃಂಗರಿಸಲಾಗಿದೆ. ಮಕ್ಕಳಿಗೆ ಇಷ್ಟವಾಗುವ ಗಿಫ್ಟ್, ಹಾಗೂ ಸಿಹಿ ಹಂಚಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಗುತ್ತಿದೆ.

ನಗರದ ಕೆಂಗೇರಿ ಬಳಿಯ ಬಾಬಾಸಾಹೇಬರ ಪಾಳ್ಯದ ಪ್ರಾಥಮಿಕ‌ ಶಾಲೆಯಲ್ಲಿ ತರಗತಿಗಳು ಪ್ರಾರಂಭವಾಗಿದೆ.

Edited By :
Kshetra Samachara

Kshetra Samachara

16/05/2022 02:32 pm

Cinque Terre

3.34 K

Cinque Terre

0

ಸಂಬಂಧಿತ ಸುದ್ದಿ