ಬೆಂಗಳೂರು: ಕೆಆರ್ ಪುರದ ಕಲ್ಕೆರೆ ಗ್ರಾಮದ ಸುತ್ತಮುತ್ತ ನೆಲೆಸಿರುವ ವಲಸೆ ಕಾರ್ಮಿಕರಿಗೆ ಶಾಂತ ಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ಹೊದಿಕೆಗಳನ್ನು ವಿತರಿಸಲಾಯಿತು.
ಅದೇ ರೀತಿ ಕೊತ್ತನೂರಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಫೌಂಡೇಶನ್ ಅಧ್ಯಕ್ಷೆ ಶಾಂತ ಕೃಷ್ಣಮೂರ್ತಿ ಅವರು ಪ್ರಿಂಟರ್ ಹಾಗೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳು ವಿತರಿಸಿದರು. ಸಮಾಜಮುಖಿ ಕಾರ್ಯಗಳ ಮೂಲಕ ಶಾಂತ ಕೃಷ್ಣಮೂರ್ತಿ ಫೌಂಡೇಶನ್ ಅಧ್ಯಕ್ಷೆ ಶಾಂತ ಕೃಷ್ಣಮೂರ್ತಿ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Kshetra Samachara
27/05/2022 06:38 pm