ವರದಿ- ಗಣೇಶ್ ಹೆಗಡೆ
ಬೆಂಗಳೂರು:2022-23 ಸಾಲಿನ ಪದವಿ ಪ್ರವೇಶ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕಾಲೇಜು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.
UUCMS ತಂತ್ರಾಂಶದ ಮೂಲಕ ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಲಭ್ಯವಿರುವ ಕೋರ್ಸ್ ಸಂಯೋಜನೆ, ಶುಲ್ಕದ ವಿವರ ಇನ್ನಿತ್ಯಾದಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು.
ಇನ್ನೂ ಕಾಲೇಜು ವೆಬ್ ಸೈಟ್ ಹಾಗೂ ನೋಟಿಸ್ ಬೋರ್ಡ್ ನಲ್ಲಿ ಪ್ರವೇಶಾತಿಯ ವಿವಿರ ಕಡ್ಡಾಯವಾಗಿ ಪ್ರಕಟಿಸಬೇಕು. ಅಗತ್ಯವಿರುವ ಸಹಾಯವಾಣಿ ರಚಿಸಿ, ಕಾಲೇಜುಗಳ ಹಂತದಲ್ಲಿ ಪ್ರವೇಶಾತಿ ಸಮಿತಿ ರಚಿಸುವಂತೆ ಕಾಲೇಜು ಶಿಕ್ಷಣ ಇಲಾಖೆ
ಪ್ರಕಟಣೆ ಯಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರಿ ಹಾಗೂ ಅನುದಾ ನಿತ ಪದವಿ ಕಾಲೇಜು ಗಳಿಗೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
PublicNext
20/06/2022 06:03 pm