ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹಳ್ಳಿಗಳಿಂದ ಶಾಲೆಗೆ ತೆರಳಲು ಅನನುಕೂಲ ಇರುವ ಮಕ್ಕಳಿಗಾಗಿಯೇ ಶಾಲಾ ಬಸ್ ಖರೀದಿಸಲು ಮುಂದಾದ ಶಿಕ್ಷಣ ಇಲಾಖೆ.
ರಾಜ್ಯ ಸರ್ಕಾರದಿಂದ ಶಾಲಾ ವಾಹನ ಖರೀದಿಗೆ ಅನುಮತಿ ನೀಡಲಾಗಿದೆ. ಸರ್ಕಾರಿ ಶಾಲೆಗಳ ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರುವುದಕ್ಕೆ ಈ ವ್ಯವಸ್ಥೆ ಮಾಡಲಾಗುತ್ತಿದೆ. ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ.
ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಮಕ್ಕಳನ್ನು ಕರೆತರುವ ಅನುಮತಿ ನೀಡಲಾಗಿದೆ.ಶಾಲಾ- ವಾಹನ ಖರೀದಿಸಲು ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ಇರುವುದುದಾಗಿ ತಿಳಿಸಿದೆ.ಶಾಲಾ ವಾಹನಕ್ಕೆ, ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ ವೆಚ್ಚಗಳನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ( SDMC) ಇತರೆ ಅನುದಾನದಡಿ ವೆಚ್ಚ ಭರಿಸುವಂತೆ ಷರತ್ತು ವಿಧಿಸಲಾಗಿದೆ.
ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಂತೆ ಸೆಳೆಯುವ ಯತ್ನವನ್ನು ಸರ್ಕಾರ ಮಾಡುತ್ತಿದೆ. ಹಳ್ಳಿಯ ಭಾಗದಲ್ಲಿ ತಲೆಎತ್ತಿರುವ ಖಾಸಗಿ ಶಾಲೆಗಳು ಹಳ್ಳಿ ಹಳ್ಳಿಗೆ ಹೋಗಿ ಮಕ್ಕಳನ್ನು ಪಿಕಪ್ ಮತ್ತು ಡ್ರಾಪ್ ಮಾಡುತ್ತಿವೆ. ಇದರಿಂದ ಸರ್ಕಾರಿ ಶಾಲೆಯ ಮಕ್ಕಳ ಸಂಖ್ಯೆಯು ಕಡಿಮೆಯಾಗುತ್ತಿತ್ತು.
ಕೋವಿಡ್ ಬಳಿಕ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಹೆಚ್ಚಾಗಿದೆ. ಖಾಸಗಿ ಶಾಲೆಗಳಿಂದ ವರ್ಗಾವಣೆ ಪತ್ರ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಸೇರಿದ್ದಾರೆ. ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಂತೆ ಸೌಲಭ್ಯವನ್ನು ಪೋಷಕರು ನಿರೀಕ್ಷಿಸುತ್ತಿದ್ದಾರೆ. ಇನ್ನು ಹಳ್ಳಿಗಳಲ್ಲಿ ಮಕ್ಕಳಿಗೆ ಶಾಲೆಗೆ ತೆರಳಲು ಬಸ್ ಇತರೆ ವಾಹನಗಳನ್ನು ಹತ್ತುವುದು ಅನಿವಾರ್ಯವಾಗಿತ್ತು. ಇದರಿಂದ ಸರ್ಕಾರ ಅಗತ್ಯವಿರುವ ಶಾಲೆಗಳಲ್ಲಿ ಶಾಲಾ ವಾಹನ ಖರೀದಿ ಮಾಡಲು ಈ ಮೂಲಕ ಆದೇಶವನ್ನು ಮಾಡಿದೆ.
Kshetra Samachara
07/07/2022 05:48 pm