ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೌರಮ್ಮ ತಿಮ್ಮಾರೆಡ್ಡಿ ಫೌಂಡೇಶನ್ ವತಿಯಿಂದ: ವಿದ್ಯಾರ್ಥಿಗಳಿಗೆ ಉಚಿತವಾಗಿ ಕಲಿಕಾ ಸಾಮಗ್ರಿ ವಿತರಣೆಯ

ಆನೇಕಲ್‌ ತಾಲ್ಲೂಕಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ ಶ್ರೀಮತಿ ಗೌರಮ್ಮ ತಿಮ್ಮಾರೆಡ್ಡಿ ಫೌಂಡೇಶನ್ ವತಿಯಿಂದ ಉಚಿತ ಕಲಿಕಾ ಸಾಮಗ್ರಿಗಳನ್ನು ನೀಡುವುದರ ಮೂಲಕ ಮಕ್ಕಳಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಇನ್ನು ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂಬಂದಿಸಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸಿದ್ದು ಇಂದು ಕೂಡ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀಮತಿ ಗೌರಮ್ಮ ತಿಮ್ಮಾರೆಡ್ಡಿ ಫೌಂಡೇಶನ್ ಅಧ್ಯಕ್ಷ ಬಿ.ಟಿ. ನಾಗರಾಜ್ ರೆಡ್ಡಿ ರವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಬೇಕಾದ ಸಮವಸ್ತ ಹಾಗೂ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಬಿ.ಶಿವಣ್ಣ, ಬೊಮ್ಮಸಂದ್ರ ಪುರಸಭೆ ಅಧ್ಯಕ್ಷ ಗೋಪಾಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೆ. ಚಂದ್ರಶೇಖರ್, ಗೋವಿಂದರಾಜ್, ಗಣ್ಯಾತಿಗಣ್ಯರು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

07/07/2022 07:23 pm

Cinque Terre

2.41 K

Cinque Terre

0

ಸಂಬಂಧಿತ ಸುದ್ದಿ