ರಿಪೋರ್ಟ್- ರಂಜಿತಾಸುನಿಲ್
ಬೆಂಗಳೂರು: ಕರ್ನಾಟಕದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ‘ಪರಿಷ್ಕರಣೆ’ ಮಾಡಲಾಗಿದ್ದು, 9,000 ದಿಂದ 12,000 ರೂ.ಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಭರ್ತಿ ಮಾಡಲಾಗುತ್ತಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಒಟ್ಟು 3708 ಅತಿಥಿ ಉಪನ್ಯಾಸಕರುಗಳನ್ನು ನೇಮಕಾತಿ ಮಾಡಿಕೊಳ್ಳಬೇಕಾಗಿದೆ.
Kshetra Samachara
07/07/2022 08:09 pm