ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶಿಕ್ಷಣದಿಂದ ಯಾರು ಕೂಡ ವಂಚಿತರಾಗಬೇಡಿ: ಬಿಎಸ್ಪಿ ಬೆಂಬಲಿತ ಅಭ್ಯರ್ಥಿ ಡಾ ಚಿನ್ನಪ್ಪ ಹೇಳಿಕೆ

ಅನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸರ್ಕಾರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಇಂದು ಮಕ್ಕಳಿಗೆ ಬೇಕಾದ ಕಲಿಕಾ ಸಾಮಗ್ರಿಗಳನ್ನು ಬಹುಜನ ಸಮಾಜವಾದಿ ಪಾರ್ಟಿಯ ಅಭ್ಯರ್ಥಿ ಡಾ ಚಿನ್ನಪ್ಪ ಚಿಕ್ಕ ಹಾಗಡೆ ನೋಟ್ ಬುಕ್ ವಿತರಣೆ ಮಾಡಿ ಮಕ್ಕಳಿಗೆ ಜಾಗೃತಿ ಮೂಡಿಸಿದರು

ಇಲ್ಲಿನ ಆನೇಕಲ್ ಪಟ್ಟಣ ಸರ್ಕಾರಿ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಕ್ಕಳ ಜೊತೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿಕೊಂಡರು ಅಲ್ಲದೇ ಓದುತ್ತಿರುವ ಎಲ್ಲಾ ಮಕ್ಕಳಿಗೂ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಿದರು.

ಇನ್ನು ಈ ವೇಳೆ ಮಾತನಾಡಿದ ಅವರು ಶಿಕ್ಷಣದಿಂದ ಪ್ರತಿಯೊಬ್ಬರಿಗೂ ವ್ಯಕ್ತಿ ಗೌರವ ಸಂಸ್ಕಾರ ಮಾನವೀಯ ಮೌಲ್ಯಗಳು ಸಿಗುತ್ತೆ ಹಾಗಾಗಿ ಶಿಕ್ಷಣದಿಂದ ಯಾರು ಕೂಡ ವಂಚಿತರಾಗಬೇಡಿ ಎಷ್ಟೇ ಕಷ್ಟ ಆದ್ರೂ ಕೂಡ ಶಿಕ್ಷಣ ಪಡೆಯಿರಿ ವಿದ್ಯಾರ್ಥಿಗಳಿಗೆ ಸಲಹೆ ನೀಡುವುದರ ಮೂಲಕ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು ಇನ್ನೂ ಕಾರ್ಯಕ್ರಮದಲ್ಲಿ ಚಿನ್ನಪ್ಪ ಚಿಕ್ಕ ಹಾಗಡೆ ಬೆಂಬಲಿಗರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು

Edited By : PublicNext Desk
Kshetra Samachara

Kshetra Samachara

08/07/2022 04:20 pm

Cinque Terre

2.16 K

Cinque Terre

0

ಸಂಬಂಧಿತ ಸುದ್ದಿ