ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು; ಬಿ.ಸಿ. ನಾಗೇಶ್

ಬೆಂಗಳೂರು: ದೇಶದ ಪ್ರಗತಿ ಹಾಗೂ ಉನ್ನತಿಗಾಗಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಇದರಲ್ಲಿ ಪ್ರತಿಯೊಬ್ಬ ಶಿಕ್ಷಕರ ಪಾತ್ರವು ಅತ್ಯಂತ ಮಹತ್ವದ್ದಾಗಿರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಬುಧವಾರ ನಡೆದ ‘ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢಶಾಲಾ ಬಡ್ತಿ ಮುಖ್ಯ ಶಿಕ್ಷಕರ ಸಂಘ’ದ ಉದ್ಘಾಟನೆ ಹಾಗೂ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

‘ಮಕ್ಕಳು, ಪಾಲಕರು, ಶಿಕ್ಷಕರು, ಕೈಗಾರಿಕೆ, ಉದ್ಯಮಗಳು, ಕಂಪನಿಗಳು, ಹಲವು ಕ್ಷೇತ್ರಗಳ ತಜ್ಞರು, ಶಿಕ್ಷಣ ತಜ್ಞರು, ರಾಜಕಾರಣಿಗಳು, ಪರಿಣಿತರು ಮಾತ್ರವಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಗ್ರಾಮ ಮಟ್ಟದಲ್ಲೂ ಸಭೆ ನಡೆಸಿ ನೂತನ ಶಿಕ್ಷಣ ನೀತಿ ಕುರಿತು ಅಭಿಪ್ರಾಯ ಪಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದ್ದರು.

Edited By : PublicNext Desk
Kshetra Samachara

Kshetra Samachara

21/09/2022 09:11 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ