ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾರ್ಥಿಗಳಲ್ಲಿ ಮಾನವೀಯ ಹಾಗೂ ಸರಳ ವ್ಯಕ್ತಿತ್ವವನ್ನು ಬೆಳೆಸಬೇಕು; ಸಿಎಂ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಜ್ಞಾನದ ಕೇಂದ್ರಗಳಾಗಿದ್ದು, ಮಾನವೀಯ ಹಾಗೂ ಸರಳ ವ್ಯಕ್ತಿತ್ವವನ್ನು ತನ್ನ ವಿದ್ಯಾರ್ಥಿಗಳಲ್ಲಿ ತುಂಬಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.

ಬೆಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿ ಇವರ ವತಿಯಿಂದ ಲಾಲ್‍ಬಾಗ್ ರಸ್ತೆ ಬಳಿ ಆಯೋಜಿಸಿರುವ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೌರವಾನಿತ್ವ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮರ್ಮು ಅವರೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಘನತೆವೆತ್ತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದು, ಶಿಕ್ಷಕರಾಗಿ, ಜನಪ್ರತಿನಿಧಿಯಾಗಿ, ರಾಜ್ಯಪಾಲರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮಾಂಕಿತರಾಗಿದ್ದ ಸಂದರ್ಭದಲ್ಲಿ ದೇವಾಲಯವನ್ನು ಸ್ವಚ್ಛಗೊಳಿಸುತ್ತಿದ್ದುದು ಅವರ ಸರಳ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ನಮ್ಮ ದೇಶದಲ್ಲಿ ಚರಿತ್ರೆ ಇದೆ. ಚಾರಿತ್ರ್ಯ ಬೇಕಾಗಿದೆ.ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನಗೊಳಿಸಲು ಅತ್ಯಂತ ಪ್ರಮುಖವಾಗಿದೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

27/09/2022 09:04 pm

Cinque Terre

686

Cinque Terre

0

ಸಂಬಂಧಿತ ಸುದ್ದಿ