ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ ಮೂಲ ದಾಖಲೆಗಳ ಪರಿಶೀಲನೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಯಿಂದ 2021-22ನೇ ಸಾಲಿನಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿಗಳ) (Graduate Primary Teacher for Class 6 to 8) ಶಿಕ್ಷಕರ ವೃಂದ ನೇಮಕಾತಿಗೆ ಸಂಬಂಧಿಸಿದಂತೆ 1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು www.schooleducation.kar.nic.in ನೋಡಬಹುದು.

ಅಕ್ಟೋಬರ್ 6 ರಿಂದ ಅಕ್ಟೋಬರ್ 12 (ಅಕ್ಟೋಬರ್ 08 ಮತ್ತು 09 ರ ರಜಾ ದಿನವನ್ನು ಹೊರತುಪಡಿಸಿ) ರವರೆಗೆ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗಾಗಿ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಬೆಂಗಳೂರು ಉತ್ತರ ಜಿಲ್ಲೆ, ಕೆ.ಜಿ.ರಸ್ತೆ, ಬೆಂಗಳೂರು-09 ನಿಗಧಿತ ವೇಳಾಪಟ್ಟಿಯಂತೆ ಖುದ್ದಾಗಿ ಹಾಜರಾಗಬೇಕೆಂದು ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.

Edited By : PublicNext Desk
PublicNext

PublicNext

03/10/2022 06:23 pm

Cinque Terre

6.22 K

Cinque Terre

0

ಸಂಬಂಧಿತ ಸುದ್ದಿ