ಬೆಂಗಳೂರು: ನಾಳೆ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ಜೇಮ್ಸ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ನಗರದಲ್ಲೂ ಜೇಮ್ಸ್ ಗಾಗಿ ಕೌಂಟ್ ಡೌನ್ ಪ್ರಾರಂಭವಾಗಿದೆ. ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ನಾಲ್ಕು ತಿಂಗಳುಗಳೇ ಕಳೆದಿವೆ. ಈ ನೋವಿನಲ್ಲೂ ಅಪ್ಪು ಅಭಿಮಾನಿಗಳು ಅವರ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ಬಿಡುಗಡೆಯ ಸಂಭ್ರಮವನ್ನ ಆಚರಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತೆಯೇ ಅಪ್ಪು ಅಭಿಮಾನಿಗಳು ಇವತ್ತು ಬಿಟಿಎಂ ಲೇಔಟ್‌ನಲ್ಲಿರುವ ಲಕ್ಷ್ಮಿ ಥಿಯೇಟರ್‌ನಲ್ಲಿ ಪುನೀತ್ ರಾಜ್‌ಕುಮಾರ್ ಅವರ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹಾಕುವಲ್ಲಿ ನಿರತರಾಗಿರೋ ದೃಶ್ಯ ಕಂಡುಬಂತು.
ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
PublicNext
16/03/2022 03:43 pm