ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಪ್ಪು ಬದುಕು ನಮಗೆಲ್ಲ ಸ್ಫೂರ್ತಿ: ಸಿಎಂ ಬೊಮ್ಮಾಯಿ

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಅವರ ಅಗಲುವಿಕೆ ನೋವು ನಮ್ಮೆನ್ನಲ್ಲ ಈಗಲೂ ಕಾಡುತ್ತಿದೆ. ಅವರ ಬದುಕೇ ಒಂದು ಸ್ಫೂರ್ತಿ. ಅವರು ಅಂಗಾಂಗ ದಾನ ಮಾಡಿರೋದು ನಮ್ಮೆಲ್ಲರಿಗೂ ಪ್ರೇರಣೆ. ಪುನೀತ್‌ಗೆ ಈಗಾಗಲೇ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಸದ್ಯದರಲ್ಲೇ ಅವರ ಕುಟುಂಬದೊಂದಿಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಅವರ ಸಿನಿಮಾ ಜೇಮ್ಸ್ ಕೂಡ ಬಿಡುಗಡೆಯಾಗುತ್ತಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಶುಭಾಶಯ ಕೋರುತ್ತೇನೆ. ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಈಗಾಗಲೇ ತೀರ್ಮಾನ ಆಗಿದೆ. ಪ್ರಶಸ್ತಿ ನೀಡಲು ಶೀಘ್ರದಲ್ಲಿ ದಿನಾಂಕ ನಿಗದಿಪಡಿಸುತ್ತೇವೆ. ಇದಕ್ಕಾಗಿ ಸಮಿತಿಯೊಂದನ್ನು ರಚಿಸಲಾಗುವುದು ಎಂದಿದ್ದಾರೆ.

Edited By :
Kshetra Samachara

Kshetra Samachara

17/03/2022 01:05 pm

Cinque Terre

1.29 K

Cinque Terre

0