ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗೆ ಬಲಿಯಾದ ಬೈಕ್ ಸವಾರ ಅಶ್ವಿನ್ (27) ಸಾವು ಪ್ರಕರಣ ಸಾರ್ವಜನಿಕರ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಘಟನೆಗೆ ಸಂಬಂಧಿಸಿ BBMP ಆಯುಕ್ತ ಗೌರವ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ.
"ಜಲಮಂಡಳಿ ತಪ್ಪಿನಿಂದ ಅನಾಹುತ ಆಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಲಮಂಡಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುತ್ತೆ. BBMPಗೆ ಮಾಹಿತಿ ನೀಡದೆ ರಸ್ತೆ ಅಗೆದಿದ್ದರಿಂದ ಅಪಘಾತ ಸಂಭವಿಸಿದೆ.
ಈಗಾಗಲೇ ಜಲಮಂಡಳಿ, ಬೆಸ್ಕಾಂ ವಿರುದ್ಧ ಕೇಸ್ ದಾಖಲಿಸಲಾಗಿದೆ. ಪರಿಹಾರದ ಕುರಿತು ಕ್ರಮ ಕೈಗೊಳ್ಳುತ್ತೇವೆ" ಎಂದು ಅಶ್ವಿನ್ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದ ಬಗ್ಗೆಯೂ ಗೌರವ್ ಗುಪ್ತಾ ತಿಳಿಸಿದ್ದಾರೆ.
Kshetra Samachara
14/03/2022 08:11 pm