ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳ ಸಭೆ ಕರೆದು ನಿರ್ದೇಶನ ನೀಡಿದ್ದಾರೆ.
ಅವರು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿ, ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದೆ. ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದ್ದು, ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ.. ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ, ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ, ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ರು.
ಅಂತೆಯೇ ಬಿತ್ತನೆ ಬೀಜ ರಾಜ್ಯದಲ್ಲಿ 7.81 ಲಕ್ಷ ಕ್ವಿಂಟಾಲ್ ನಷ್ಟು ಲಭ್ಯವಿದ್ದು, ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಲಭ್ಯವಿದೆ. ಆದರೆ ನಕಲಿ ಬೀಜಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಈ ಕುರಿತು ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ನಕಲಿ ಬೀಜ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Kshetra Samachara
03/06/2022 03:06 pm