ಅಧಿಕಾರ ಬರ್ತಿದ್ದಂತೆ ಲೋಕಾಯುಕ್ತ ಭರ್ಜರಿ ಕಾರ್ಯಚರಣೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ 10 ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಸರ್ಕಾರಿ ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಿದೆ.
ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್, ಕೆಸಿ ಜನರಲ್, ಮಿಂಟೋ ಕಣ್ಣಿನ ಆಸ್ಪತ್ರೆ, ವಾಣಿ ವಿಲಾಸ, ಡಾ. ಬಾಬು ಜಗಜೀವರ್ ರಾಮ್ ಆಸ್ಪತ್ರೆ, ಹಲಸೂರು ರೆಫರಲ್ ಆಸ್ಪತ್ರೆ, ಸಿದ್ದಯ್ಯ ರೋಡ್ ರೆಫರಲ್ ಆಸ್ಪತ್ರೆ, ಪ್ಯಾಲೇಸ್ ಗುಟ್ಟಹಳ್ಳಿ ಮೆಟರ್ನಿಟಿ ಆಸ್ಪತ್ರೆ, ಮಾಗಡಿ ರೋಡ್ ಪಶು ಚಿಕಿತ್ಸಾಲಯ ಆಸ್ಪತ್ರೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.
ಈ ಹಿಂದೆ ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ದೂರು ಕೇಳಿಬಂದಿದ್ದು, ಹೊರ, ಒಳ ರೋಗಿಗಳ ದಾಖಲಾತಿ ಕಡತಗಳನ್ನು ಪರಿಶೀಲನೆ ಮಾಡಲಾಗಿದೆ. ಜೊತೆಗೆ ಸಿಬ್ಬಂದಿ ಹಾಜರಾತಿ ಬಗ್ಗೆಯೂ ಪರಿಶೀಲನೆ ಮಾಡಲಾಗ್ತಿದೆ.
PublicNext
24/08/2022 03:46 pm