ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅರಳುಮಲ್ಲಿಗೆ ಗ್ರಾಪಂ ಕಚೇರಿ ಮೇಲೆ ಎಸಿಬಿ ದಾಳಿ; ಪಿಡಿಒ ಪರಾರಿ!

ತಾಲೂಕಿನ‌ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ಈ ಸಂದರ್ಭ ಪಿಡಿಒ ಪರಾರಿಯಾಗಿದ್ದಾರೆ.

ಎಸಿಬಿ ಡಿವೈಎಸ್ಪಿ ಜಗದೀಶ್ ನೇತೃತ್ವದಲ್ಲಿ‌ ದಾಳಿ‌ ನಡೆದಿದ್ದು, 30ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದರು. ನಿನ್ನೆ ಮಧ್ಯಾಹ್ನ 3 ಗಂಟೆಗೆ ಪಂಚಾಯತ್ ಕಾರ್ಯಾಲಯಕ್ಕೆ ಆಗಮಿಸಿದ ಅಧಿಕಾರಿಗಳ ತಂಡ ರಾತ್ರಿ 11 ಗಂಟೆವರೆಗೂ ದಾಖಲೆಗಳ ಪರಿಶೀಲನೆ ನಡೆಸಿತು.

ಅರಳುಮಲ್ಲಿಗೆ ಗ್ರಾಪಂ ವ್ಯಾಪ್ತಿಯ ಆಲಹಳ್ಳಿ ಗ್ರಾಮದ ಸರ್ವೆ ನಂ. 13/1 ರ 21 ಗುಂಟೆ ಜಮೀನು ಮತ್ತು 19 ಗುಂಟೆ ಜಮೀನನ್ನು ಯಾವುದೇ ಅನುಮತಿ ಇಲ್ಲದೆ ಕೃಷಿಭೂಮಿಯನ್ನು ವಾಸಯೋಗ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಿದ್ದರು. ಅಕ್ರಮವಾಗಿ ಖಾತೆಗಳನ್ನು ಮಾಡಿರುವ ಬಗ್ಗೆ ಸಾರ್ವಜನಿಕರು ಎಸಿಬಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ಬಗ್ಗೆ ಮಾಹಿತಿ ತಿಳಿದ ಪಿಡಿಒ ಸುಧಾಕರ್ ರೆಡ್ಡಿ ಕಾರ್ಯಾಲಯಕ್ಕೆ ಬಾರದೆ ಎಸ್ಕೇಪ್ ಆಗಿದ್ದಾರೆ. ಈ ಅಧಿಕಾರಿಯನ್ನು ಇಂದು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸಿಬಿ

Edited By :
PublicNext

PublicNext

24/06/2022 01:53 pm

Cinque Terre

28.07 K

Cinque Terre

0

ಸಂಬಂಧಿತ ಸುದ್ದಿ