ಚಾಮರಾಜಪೇಟೆ ಮೈದಾನದ ಕಿಚ್ಚು ಆರುವ ಮುನ್ನವೇ ಈಗ ಮತ್ತೊಂದು ಕಿಚ್ಚು ಹೊತ್ತಿ ಕೊಂಡಿದೆ. ಮಸ್ಜಿದ್ ಎ ಅಲ್ ಖುಬಾ ಎಂಬ ಮಸೀದಿಯನ್ನ ಡೆಮಾಲಿಷ್ ಮಾಡಲು ಬಿಬಿಎಂಪಿ ನೋಟಿಸ್ ನೀಡಿದೆ. ಈ ಮಸೀದಿ ವಿಜಯನಗರದಲ್ಲಿದೆ.
ಈ ಮಸೀದಿಯನ್ನು ಸಾರ್ವಜನಿಕರ ಓಡಾಟಕ್ಕೆ ಮೀಸಲಿಟ್ಟ ಐದು ಅಡಿ ಪ್ಯಾಸೇಜ್ ನ ಒತ್ತುವರಿ ಮಾಡ್ಕೊಂಡು ಕಟ್ಟಲಾಗಿದೆ. ಈಗ ಒತ್ತುವರಿ ಮಾಡಿ ನಿರ್ಮಿಸಿರುವ ಭಾಗವನ್ನ ತೆರವು ಮಾಡಿ ಬಿಬಿಎಂಪಿ ವಶಕ್ಕೆ ಪಡೆಯಲು ಪ್ರಾದೇಶಿಕ ಆಯುಕ್ತರು ಬಿಬಿಎಂಪಿಗೆ ಆದೇಶ ನೀಡಿದ್ದಾರೆ. ಇನ್ನು ಆದೇಶದ ಅನುಸಾರ ಬಿಬಿಎಂಪಿ, ಮಸೀದಿಗೆ ಡೆಮಾಲಿಷನ್ ಆರ್ಡರ್ ನೀಡಿದೆ.
ಒತ್ತುವರಿ ಮಾಡಲಾಗಿದೆ ಎಂಬ ಭಾಗವನ್ನ ತೆರವು ಮಾಡಲು ಮಸೀದಿಯ ಮುಖ್ಯಸ್ಥರಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ನಿವೇಶನ ಸಂಖ್ಯೆ13 ಹಾಗೂ 15ರಲ್ಲಿ ಮಸೀದಿ ನಿರ್ಮಾಣವಾಗಿದ್ದು, ನಿವೇಶನ ಸಂಖ್ಯೆ13ರ ಮಾಲೀಕರಾಗಿದ್ದ ಪಿ.ಬಾಷಾ ಒಂದು ಟ್ರಸ್ಟ್ ಗೆ ಬರೆದುಕೊಟ್ಟಿದ್ರು. ನಂತರ ನಿವೇಶನ ಸಂಖ್ಯೆ15ರ ಮಾಲೀಕರು ಅಮೀನಾ ಎಂಬುವವರು ಕೂಡ ನಿವೇಶನವನ್ನ ಮಸೀದಿಗೆ ನೀಡಿದ್ದಾರೆ.
ಈ ಎರಡೂ ನಿವೇಶನಗಳನ್ನ ಒಂದೂಗೂಡಿಸಿ ಮಸೀದಿ ನಿರ್ಮಾಣ ಮಾಡಲಾಗಿತ್ತು. ಆದ್ರೆ, ಎರಡು ಸೈಟ್ ಗಳ ಮಧ್ಯೆ ನಿವೇಶನ ಸಂಖ್ಯೆ14 ಕೂಡ ಇತ್ತಂತೆ. ಅದನ್ನ ಒತ್ತುವರಿ ಮಾಡ್ಕೊಂಡು ಮಸೀದಿ ನಿರ್ಮಾಣ ಮಾಡಿದ್ದಾರೆ. ನಿವೇಶನ ಸಂಖ್ಯೆ 14,5.5 ಅಡಿ ಅಗಲ ಹಾಗೂ 45 ಅಡಿ ಉದ್ದವಿತ್ತು. ಅದನ್ನು ಸಾರ್ವಜನಿಕರ ಓಡಾಟಕ್ಕೆ ಪ್ಯಾಸೇಜ್ ಇತ್ತಂತೆ. ಅದನ್ನ ಒತ್ತುವರಿ ಮಾಡಿ ಮಸೀದಿ ನಿರ್ಮಾಣ ಮಾಡಲಾಗಿದೆ. ಆದ್ರೆ ಇದಕ್ಕೆ ಈ ಹಿಂದೆ ಬಿಬಿಎಂಪಿ ಖಾತಾ ಕೂಡಾ ಮಾಡಿಕೊಟ್ಟಿತ್ತು.
ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವಾದ- ಪ್ರತಿವಾದ ನಡೆದು ಅಂತಿಮ ಆದೇಶ ಹೊರಡಿಸಲಾಗಿದೆ. ಅದರಂತೆ ನಿವೇಶನ ಸಂಖ್ಯೆ 14ರ ಐದು ಅಡಿ ಜಾಗ ಪಾಲಿಕೆ ಸ್ವತ್ತೆಂದು ಘೋಷಿಸಿದ್ದು, ಸಾರ್ವಜನಿಕರ ಸ್ವತ್ತೆಂದು ಘೋಷಣೆ ಮಾಡಿದ್ದಾರೆ. ತಕ್ಷಣ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲು ಬಿಬಿಎಂಪಿಗೆ ಪ್ರಾದೇಶಿಕ ಆಯುಕ್ತರು ಆದೇಶ ನೀಡಿದ್ದಾರೆ. ಅದರಂತೆ ಬಿಬಿಎಂಪಿ ಕೂಡ ಮಸೀದಿಗೆ ಡೆಮಾಲಿಷನ್ ನೋಟಿಸ್ ಜಾರಿ ಮಾಡಿದೆ.
PublicNext
18/07/2022 06:00 pm