ಆನೇಕಲ್ ತಾಲ್ಲೂಕಿನ ಸರ್ಜಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ರೇಷ್ಮೇ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನೂತನ ಸರ್ಕಾರಿ ನ್ಯಾಯ ಬೆಲೆ ಅಂಗಡಿಗೆ ಶಾಸಕ ಬಿ.ಶಿವಣ್ಣ ಚಾಲನೆ ನೀಡಿ ಶುಭ ಹಾರೈಸಿದರು.
ಇನ್ನು ಈ ವೇಳೆ ಸರ್ಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಬುಡುಗಪ್ಪ ರವರು ಮಾತನಾಡಿ ಸರ್ಜಾಪುರ ಗ್ರಾಮಸ್ಥರ ಅನುಕೂಲಕ್ಕಾಗಿ ರೇಷ್ಮೇ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಈ ಸರ್ಕಾರಿ ನ್ಯಾಯಬೆಲೆ ಅಂಗಡಿ ಪ್ರಾರಂಭ ಮಾಡಿದ್ದು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇನ್ನು ಕಾರ್ಯಕ್ರಮದಲ್ಲಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಅಧ್ಯಕ್ಷ ಮುರಳಿಕೃಷ್ಣ, ಸಿಇಓ ಬಿ.ಎ.ನಂಜಪ್ಪ, ಸರ್ಜಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುನೀತಾ ಶಶಿಧರ್, ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
Kshetra Samachara
19/09/2022 10:28 pm