ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 2000 ಮನೆಗಳನ್ನು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.
ಇಂದು ನಗರದ ಯಲಹಂಕ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಮಿಸಲಾಗುತ್ತಿರುವ ಬಹುಮಹಡಿ ಕಟ್ಟಡಗಳ ಕಾಮಗಾರಿ ಪರಿಶೀಲನೆ ನಡೆಸಿ ಮಾತಾನಾಡಿದ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಸೂರಿಲ್ಲದವರಿಗೆ ಸೂರು’ ಎಂಬ ಧ್ಯೇಯದಡಿ 2016-17 ಮತ್ತು 2017-18 ರಲ್ಲಿ ‘ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಗೆ ಕೇಂದ್ರ ಸರ್ಕಾರವು ಮೊದಲನೇ ಕಂತಿನ ರೂ .600 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕಂದಾಯ ಇಲಾಖೆಯಿಂದ 553 ಎಕರೆ ಜಮೀನನ್ನು ನಿಗಮಕ್ಕೆ ಹಸ್ತಾಂತರಿಸಿಕೊಳ್ಳಲಾಗಿದೆ ಎಂದರು.
ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಸುಮಾರು 10 ಕಿ.ಮೀ ದೂರದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 2000 ಮನೆಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಅರ್ಹ ಫಲಾನುಭವಿಗಳಿಗೆ ನೀಡುವುದರ ಮುಖಾಂತರ ಮೊದಲನೇ ಹಂತದ 52000 ಮನೆಗಳ ಪೈಕಿ 48000 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು ಡಿಸೆಂಬರ್ ಅಂತ್ಯದೊಳಗೆ 15 ರಿಂದ 20 ಸಾವಿರ ಮನೆಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು. ಮನೆಗಳನ್ನು ಸುಸರ್ಜಿತವಾಗಿ ನಿರ್ಮಿಸಲಾಗುತ್ತಿದ್ದು ಒಂದು ಕುಟುಂಬ ವಾಸ ಮಾಡಲು ಅವಕಾಶ ಕಲ್ಪಿಸಿಲಾಗಿದೆ. ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾಂಪೌಂಡ್, ಒಳರಸ್ತೆ , ಕುಡಿಯುವ ನೀರು, ಬೀದಿ ದೀಪ ಹಾಗೂ ಇತರೆ ವ್ಯವಸ್ಥಿತವಾದ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
Kshetra Samachara
17/08/2022 07:10 pm