ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಹನಗಳ ನಂಬರ್ ಪ್ಲೇಟ್ ನಲ್ಲಿ ಹೆಸರು,ಹುದ್ದೆ ಹಾಕುವಂತಿಲ್ಲ..!

ಇನ್ನು ಮುಂದೆ ವಾಹನದ ನಂಬರ್‌ಪ್ಲೇಟ್ ಮೇಲೆ ಯಾವುದೇ ಹೆಸರು, ಹುದ್ದೆಯನ್ನು ಹಾಕುವಂತಿಲ್ಲ.. ಒಂದು ವೇಳೆ ನಾಮಫಲಕ ತೆರವು ಗೊಳಿಸದಿದ್ರೆ ಅಂತಹ ವಾಹನ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ‌ ಹೊರಡಿಸಿದ್ದಾರೆ..

ನೀವೂ ಯಾವುದಾದರೂ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಆಗಿದ್ದೀರಾ?, ನಿಮ್ಮ ವಾಹನಗಳ ನಂಬರ್ ಪ್ಲೇಟ್ ಮೇಲೆ ನಿಮ್ಮ ಹುದ್ದೆಯನ್ನು ಹಾಕಿದ್ದೀರಾ?, ಹಾಗಿದ್ದರೆ ಇದನ್ನು ಈಗಲೇ ತೆಗೆದುಬಿಡಿ. ಇಲ್ಲವೆಂದರೆ ದಂಡ ತೆರಬೇಕಾದೀತು.. ಇನ್ನು ಮುಂದೆ ತಮ್ಮ ತಮ್ಮ ವಾಹನದ ಮೇಲೆ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಎಂದೆಲ್ಲ ನಾಮಫಲಕ ಹಾಕುವುದನ್ನು ತಡೆಯಲು ಸರ್ಕಾರ ಮುಂದಾಗಿದೆ..

ಕಾರಿನ ನಂಬರ್‌ಪ್ಲೇಟ್ ಮೇಲೆ ಅಧ್ಯಕ್ಷ, ಕಾರ್ಯದರ್ಶಿ, ಸಂಘಟನೆ ಹೆಸರು, ಸ್ಟಾರ್ ನಟರ ಹೆಸರು ಹಾಕಿದ್ದಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಿಂದಲೇ ಆದೇಶ ಹೊರಡಿಸಲಾಗಿದೆ. ನಾಳೆ ಇಂದ ಎಲ್ಲಾ ನಾಮಫಲಕ ತೆರವು ಮಾಡಿ ವಾಹನವನ್ನು ರಸ್ತೆಗಿಳಿಸಬೇಕು.. ನಿಯಮದ ಪ್ರಕಾರ, ವಾಹನದ ನಂಬರ್‌ಪ್ಲೇಟ್ ಮೇಲೆ ಯಾವುದೇ ಹೆಸರು, ಹುದ್ದೆಯನ್ನು ಹಾಕುವಂತಿಲ್ಲ.

ಆದೇಶ ಪಾಲನೆಯ ಗಡುವಿನ ಬಳಿಕ ನಾಮಫಲಕ ತೆರವುಗೊಳಿಸದಿದ್ರೆ ಅಂತಹ ವಾಹನ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ‌ ಹೊರಡಿಸಿದ್ದಾರೆ.ಯಾವುದೇ ಖಾಸಗಿ ವಾಹನಗಳ ಮಾಲೀಕರುಗಳು ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ ಸರ್ಕಾರದಿಂದ ಅನುಮತಿ ಪಡೆದುಕೊಳ್ಳಬೇಕು ಹೇಳಲಾಗಿದೆ.

Edited By : PublicNext Desk
Kshetra Samachara

Kshetra Samachara

23/05/2022 07:20 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ