ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿಗೆ ಭಾರತ್‌ ಗೌರವ್‌ ರೈಲು: ಸಚಿವೆ ಶಶಿಕಲಾ ಜೊಲ್ಲೆ..!

ಬೆಂಗಳೂರು: ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿ ಯಾತ್ರೆಗೆ ಭಾರತ್ ಗೌರವ್ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮಾನ್ಯ ಮಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದರು. ಇಂದು ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಕಾಶಿ ಯಾತ್ರೆಗೆ ಕಾಯ್ದಿರಿಸಲಾಗಿರುವ ರೈಲಿನ ಪರಿಶೀಲನೆ ಹಾಗೂ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆ ಕೈಗೊಳ್ಳಬೇಕು ಎನ್ನುವುದು ಬಹುಪಾಲು ಹಿಂದುಗಳ ಆಸೆಯಾಗಿರುತ್ತದೆ. ಇದರನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನೆಲುಬಾಗಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಂತು ಎಲ್ಲಾ ರೀತಿಯ ಸಹಕಾರ ನೀಡಿದ್ದಕ್ಕಾಗಿ ಅಭಿನಂದನೆಯನ್ನು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

11/07/2022 08:18 pm

Cinque Terre

758

Cinque Terre

0

ಸಂಬಂಧಿತ ಸುದ್ದಿ