ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೊಳಚೆ ಪ್ರದೇಶದ ನಿವಾಸಿಗಳಿಗೆ ಕ್ರಯಪತ್ರ ವಿತರಿಸಿದ ಸಚಿವ..!

ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿನಗರ ವಾರ್ಡಿನ ಮಾರುತಿನಗರದ ಕೊಳಚೆ ಪ್ರದೇಶದ ನಿವಾಸಿಗಳಿಗೆ ಇಂದು ಕ್ರಯಪತ್ರವನ್ನು ಹಂಚಲಾಯಿತು. ಗೃಹಕಚೇರಿಯಲ್ಲಿಂದು ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಕ್ರಯಪತ್ರ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಸಚಿವರು ಕ್ರಯಪತ್ರವಿಲ್ಲದೇ ನೊಂದ ಕುಟುಂಬಗಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಕ್ರಯ ಪತ್ರ ವಿತರಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಕ್ರಯಪತ್ರ ಲಭಿಸಿರುವುದರಿಂದ ಒಂಟಿ ಮನೆ ಯೋಜನೆ ಮತ್ತು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಪಡೆದು ಸುಸಜ್ಜಿತ ಮನೆ ನಿರ್ಮಾಣ ಮಾಡಿಕೊಳ್ಳಬಹುದು.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಸೂರು ಇಲ್ಲದೇ ಇರಬಾರದು, ಪ್ರತಿಯೊಂದು ಕುಟುಂಬಗಳಿಗೆ ಸುಸಜ್ಜಿತ ಮನೆಯಲ್ಲಿ ವಾಸಮಾಡಬೇಕು ಎಂಬ ಆಶಯದಿಂದ ಪ್ರತಿಯೊಬ್ಬರಿಗೂ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

08/08/2022 07:52 pm

Cinque Terre

912

Cinque Terre

0

ಸಂಬಂಧಿತ ಸುದ್ದಿ