ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2ರಿಂದ ಯಶಸ್ವಿನಿ ಯೋಜನೆ ಮರು ಜಾರಿ: ಸಚಿವ ಎಸ್​ಟಿ ಸೋಮಶೇಖರ್ ಸ್ಪಷ್ಟನೆ..!

ಬೆಂಗಳೂರು: ರಾಜ್ಯದಲ್ಲಿ ಆಯುಷ್ಮಾನ್ ಭಾರತ್, ಯಶಸ್ವಿನಿ ಯೋಜನೆ ಎರಡೂ ಇರಲಿವೆ. ಹಿಂದೆ ಇದ್ದ ಎಲ್ಲ ವ್ಯವಸ್ಥೆ ಅಳವಡಿಸಿಕೊಂಡು ಯಶಸ್ವಿನಿ ಯೋಜನೆ ಜಾರಿಯಾಗಲಿದೆ ಎಂದು ಸಚಿವ ಎಸ್​ಟಿ ಸೋಮಶೇಖರ್ ತಿಳಿಸಿದರು.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಜೊತೆಯಲ್ಲಿಯೇ ಈ ಹಿಂದೆ ಇದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಅಕ್ಟೋಬರ್ 2ರಿಂದ ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಸಹಕಾರ ಸಚಿವ ಎಸ್​ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್​​ನ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪ್ರತಿಪಕ್ಷ ಸಚೇತಕ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಯುಷ್ಮಾನ್ ಭಾರತ್ ಯೋಜನೆ ಇದ್ದರೂ ಕರ್ನಾಟಕದಾದ್ಯಂತ ಯಶಸ್ವಿನಿ ಮರುಜಾರಿ ಬೇಡಿಕೆ ಇತ್ತು. ಇದಕ್ಕೆ ಆರೋಗ್ಯ, ಹಣಕಾಸು ಇಲಾಖೆಯ ಅನುಮತಿ ಸಿಕ್ಕಿದೆ. ಯಶಸ್ವಿನಿ ಯೋಜನೆಗೆ ಹಳೆ ಟ್ರಸ್ಟ್ ಇತ್ತು ಅದನ್ನು ಹೊಸದಾಗಿ ಮಾಡುತ್ತಿದ್ದೇವೆ ಎಂದರು.

ಅಕ್ಟೋಬರ್ 2ರಿಂದ ಯೋಜನೆ ಜಾರಿ ಮಾಡುವುದಾಗಿ ಈಗಾಗಲೇ ಸಿಎಂ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಆಯುಷ್ಮಾನ್, ಯಶಸ್ವಿನಿ ಯೋಜನೆ ಎರಡೂ ಇರಲಿವೆ. ಹಿಂದೆ ಇದ್ದ ಎಲ್ಲ ವ್ಯವಸ್ಥೆ ಅಳವಡಿಸಿಕೊಂಡು ಯಶಸ್ವಿನಿ ಯೋಜನೆ ಜಾರಿಯಾಗಲಿದೆ. ಅನುಷ್ಠಾನದ ನಂತರ ಯಾವುದೇ ತೊಂದರೆ ಆಗಬಾರದು ಎಂದು ಎಲ್ಲ ಆಯಾಮದಲ್ಲಿಯೂ ಪರಿಶೀಲಿಸಿ ಸಮಯ ಪಡೆದು ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದರು.

Edited By : PublicNext Desk
PublicNext

PublicNext

14/09/2022 03:11 pm

Cinque Terre

3.31 K

Cinque Terre

0

ಸಂಬಂಧಿತ ಸುದ್ದಿ