ದೇವನಹಳ್ಳಿ: ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜು ಬಂದ್ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲಾ-ಕಾಲೇಜು ಮುಚ್ಚಲು ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.
ಕೋವಿಡ್ ಪ್ರಕರಣ ಹೆಚ್ಚಾಗುವ ಪ್ರದೇಶವನ್ನು ಸೆಮಿ ಕಂಟೋನ್ಮೆಂಟ್ ಪ್ರದೇಶವೆಂದು ಪರಿಗಣಿಸಲಾಗುತ್ತದೆ.
ಆ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು, ವಿಮಾನ ನಿಲ್ದಾಣಕ್ಕೆ ಹೈ ರಿಸ್ಕ್ ದೇಶಗಳಿಂದ ಬರುವವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಅಲ್ಲಿ ಜನಸಂದಣಿ ನಿಯಂತ್ರಿಸಲು ಅಧಿಕಾರಿಗಳು, ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.
ಇಲ್ಲಿಂದ ಶಬರಿಮಲೆ ಮತ್ತು ʼಓಂ ಶಕ್ತಿʼ ದೇವಸ್ಥಾನಗಳಿಗೆ ಭೇಟಿ ನೀಡಿದ ಪ್ರಯಾಣಿಕರು ಆಗಮಿಸಿದ ತಕ್ಷಣ ಕೆಎಸ್‌ಆರ್‌ಟಿಸಿಯಿಂದ ಮಾಹಿತಿ ಪಡೆದು ಕೋವಿಡ್ ಪರೀಕ್ಷೆಗೊಳಪಡಿಸಲಾಗುವುದು ಎಂದರು.
Kshetra Samachara
05/01/2022 09:51 pm