ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಪಾದಯಾತ್ರೆ ಸಮಾರೋಪ ಸಮಾರಂಭಕ್ಕೆ ಬಿಬಿಎಂಪಿ ಗ್ರೀನ್ ಸಿಗ್ನಲ್ !

ವರದಿ-ಗಣೇಶ್ ಹೆಗಡೆ

ಬೆಂಗಳೂರು: ಇದೇ ತಿಂಗಳು 18 ಮತ್ತು 19 ರಂದು ಮೇಕೆದಾಟು ಯೋಜನೆ ಜಾರಿ ಕುರಿತಂತೆ ನಡೆಯುತ್ತಿರುವ ಕಾಂಗ್ರೆಸ್ ಪಾದಯಾತ್ರೆಯ ಸಮಾರೋಪ ಸಮಾರಂಭಕ್ಕೆ ಬಿಬಿಎಂಪಿ ಅನುಮತಿ ನೀಡಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಈ ಬಗ್ಗೆ ಜ.4 2022 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರಿಗೆ ಬಿಬಿಎಂಪಿ ದಕ್ಷಿಣ ವಲಯದ ಜಂಟಿ ಆಯುಕ್ತರು ಪತ್ರ ಬರೆದಿದ್ದರು ಎನ್ನಲಾಗಿದೆ.ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ ಪಕ್ಕದ ಗ್ರೌಂಡ್ ನಲ್ಲಿ ಕೆಪಿಸಿಸಿ ಕಾರ್ಯಕ್ರಮಕ್ಕೆ ಪಾಲಿಕೆ ಅನುಮತಿ ನೀಡಿತ್ತು.

ಕಳೆದ ನಾಲ್ಕು ದಿನಗಳಿಂದ ಮೇಕೆದಾಟು ಯೋಜನೆ ಜಾರಿ ಸಂಬಂಧ ವಿಪಕ್ಷ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ.ಅದರ ಅಂತಿಮ ದಿನ ಸಮಾರೋಪ ಸಮಾರಂಭ ಬಸವನಗುಡಿಯಲ್ಲಿ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.ಇದಕ್ಕೆ ಪಾಲಿಕೆ ಆಟದ ಮೈದಾನವನ್ನು ಬಳಸಿಕೊಳ್ಳಲು ಬಿಬಿಎಂಪಿ ಅನುಮತಿ ನೀಡಿದೆ.

Edited By :
PublicNext

PublicNext

12/01/2022 05:52 pm

Cinque Terre

20.74 K

Cinque Terre

0

ಸಂಬಂಧಿತ ಸುದ್ದಿ