ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಸ್ತಿ ತೆರಿಗೆ ಸಂಗ್ರಹ ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ: ಮುಖ್ಯ ಆಯುಕ್ತ ಗೌರವ್ ಗುಪ್ತ

ಬೆಂಗಳೂರು- ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಗುರಿಯನ್ನು ಸಮರ್ಥವಾಗಿ ಸಾಧಿಸಬೇಕು, ಅದಕ್ಕಾಗಿ ಅಗತ್ಯ ತಂತ್ರಜ್ಞಾನದ ಸಹಾಯ ಪಡೆದುಕೊಂಡು ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮ ವಹಸಿಲು ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಂಬಂಧ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಕಂದಾಯ ಅಧಿಕಾರಿಗಳು, ಸಹಾಯ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ ಕಾರ್ಯೋನ್ಮುಖರಾಗಬೇಕು. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಿ ಆಸ್ತಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮ ವಹಿಸಬೇಕು ಎಂದರು.

ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ಆಸ್ತಿಗಳನ್ನು ಪತ್ತೆ ಮಾಡಿ ತೆರಿಗೆ ವ್ಯಾಪ್ತಿಗೆ ತರಬೇಕು. ತೆರಿಗೆ ಸಂಗ್ರಹ ಸಂಬಂಧವಾಗಿ ಸುಧಾರಿತ ತಂತ್ರಜ್ಞಾನದ ಆವಶ್ಯಕತೆ ಕಂಡುಬಂದಲ್ಲಿ ಆ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಸಕ್ತ ಸಾಲಿನಲ್ಲಿ 4,000 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಇದುವರೆಗೆ 2,667.77 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದ್ದು(ವಲಯವಾರು ತೆರಿಗೆ ಸಂಗ್ರಹ ಮಾಹಿತಿ ಪಟ್ಟಿ ಲಗತ್ತಿಸಿದೆ), ಎಲ್ಲಾ ಅಧಿಕಾರಿಗಳು ಗುರಿಯನ್ನು ತಲುಪಸಲು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದರು.

1. ಯಲಹಂಕ - 265.98

2. ಮಹದೇವಪುರ - 683.07

3. ದಾಸರಹಳ್ಳಿ - 73.78

4. ಆರ್.ಆರ್.ನಗರ - 182.00

5. ಬೊಮ್ಮನಹಳ್ಳಿ - 285.04

6. ಪಶ್ವಿಮ - 272.11

7. ದಕ್ಷಿಣ - 398.54

8. ಪೂರ್ವ - 507.26

*ಒಟ್ಟು : 2667.77 ಕೋಟಿ*

Edited By : PublicNext Desk
Kshetra Samachara

Kshetra Samachara

27/01/2022 01:10 pm

Cinque Terre

314

Cinque Terre

0

ಸಂಬಂಧಿತ ಸುದ್ದಿ